ಬೆಂಗಳೂರು : ನಮ್ಮ ಮೆಟ್ರೋದ ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ನಿಲ್ದಾಣಗಳ ನಡುವೆ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣ, ಏಪ್ರಿಲ್ 5ರ ಭಾನುವಾರ ಬೆಳಿಗ್ಗೆ ರೈಲು ಸಂಚಾರದಲ್ಲಿ ಬದಲಾವಣೆ ಇರಲಿದೆ ಎಂದು ಬಿಎಂಆರ್ಸಿಎಲ್ (BMRCL) ಪ್ರಕಟಿಸಿದೆ.
- ಸಮಯ: ಭಾನುವಾರ ಬೆಳಿಗ್ಗೆ 7:00 ರಿಂದ 9:00 ಗಂಟೆಯವರೆಗೆ (2 ಗಂಟೆಗಳು).
- ಸಂಚಾರ ಸ್ಥಗಿತ: ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಮೈಸೂರು ರಸ್ತೆ ನಿಲ್ದಾಣಗಳ ನಡುವೆ ರೈಲು ಸಂಚಾರವಿರುವುದಿಲ್ಲ.
- ಯಥಾಸ್ಥಿತಿ ಸಂಚಾರ: ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ, ಮೆಜೆಸ್ಟಿಕ್ನಿಂದ ವೈಟ್ಫೀಲ್ಡ್ವರೆಗೆ ಹಾಗೂ ಹಸಿರು ಮಾರ್ಗದಲ್ಲಿ ರೈಲುಗಳು ಎಂದಿನಂತೆ ಸಂಚರಿಸಲಿವೆ.
- ಪುನರಾರಂಭ: ಬೆಳಿಗ್ಗೆ 9:00 ಗಂಟೆಯ ನಂತರ ಇಡೀ ನೇರಳೆ ಮಾರ್ಗದಲ್ಲಿ ಸಂಚಾರ ಸಹಜ ಸ್ಥಿತಿಗೆ ಮರಳಲಿದೆ.
ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಬೆಳಿಗ್ಗೆ 2 ಗಂಟೆಗಳಕಾಲ ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತ
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಕೈಗೊಳ್ಳಲಾಗುತ್ತಿದೆ.
ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 07:00 ರಿಂದ 09:00 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.
ಇತರೆ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟ ದಿಂದ ಮೈಸೂರು ರಸ್ತೆ; ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ನಿಂದ ವೈಟೀಲ್ಡ್ (ಕಾಡುಗೋಡಿ); ಮಾದಾವರ ದಿಂದ ರೇಷ್ಮೆ ಸಂಸ್ಥೆ ಮತ್ತು ಆರ್.ವಿ.ರಸ್ತೆ ಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಯಿಂದ ವೇಳಾಪಟ್ಟಿಯಂತೆ ಸಂಚರಿಸಲಿವೆ.
ಬೆಳಿಗ್ಗೆ 09:00 ಗಂಟೆಯ ನಂತರ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳು ಎಂದಿನಂತೆ ಸಂಚರಿಸಲಿವೆ. ನಮ್ಮ ಮೆಟ್ರೋ ಪ್ರಯಾಣಿಕರು ಮೇಲೆ ತಿಳಿಸಿರುವ ಬದಲಾವಣೆಗಳನ್ನು ಗಮನಿಸಿ ಸಹಕರಿಸುವಂತೆ ವಿನಂತಿಸಲಾಗಿದೆ.

