ಪೋಷಕರ ಗಮನಕ್ಕೆ : ‘ಮೌಲಾನಾ ಆಜಾದ್’ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕಾರ್ಯನಿರ್ವಹಿಸುತ್ತಿರುತ್ತಿದ್ದು, ಪ್ರಸ್ತುತ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.

2024-25ನೇ ಸಾಲಿನಲ್ಲಿ ಪ್ರವೇಶ ಪ್ರಕ್ರಿಯೆಗಾಗಿ ಅರ್ಹವಿರುವ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲ https://dom.karnataka.gov.in ಮೂಲಕ ಆಜಾದ್ ಮಾದರಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರು ತಮ್ಮ ಅಧೀನದ ಎಲ್ಲಾ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಶೇ.100 ರಷ್ಟು ದಾಖಲಾತಿಯನ್ನು ಹೊಂದಲು ಜಿಲ್ಲಾ ಹಂತದಲ್ಲಿಯೇ ಪ್ರತ್ಯೇಕ ಪ್ರವೇಶಾತಿ ಅಧಿಸೂಚನೆ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವುದು.

ನಿಯಾಮಾನುಸಾರ ಮೆರಿಟ್ ಹಾಗೂ ರೋಸ್ಟರ್ ಪದ್ಧತಿ ಪ್ರಕಾರ 6ನೇ ತರಗತಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ತಮ್ಮ ಅಧೀನದ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡಿ ದಾಖಲಾತಿ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವುದು.ಮುಂದುವರೆದು, ಅರ್ಜಿ ಸಲ್ಲಿಸುವ ವಿಧಾನ, ಪ್ರವೇಶ ಪರೀಕ್ಷೆಯ ಪ್ರಕ್ರಿಯೆ, ಮೀಸಲಾತಿ ವಿವರ, ವೇಳಾಪಟ್ಟಿ ಮತ್ತು ದಾಖಲಾತಿಗೆ ಸಂಬಂಧಿಸಿದ ಇತರೆ ವಿವರಗಳ ಸಂಪೂರ್ಣ ಮಾರ್ಗಸೂಚಿಗಳನ್ನು ಸದರಿ ಅಧಿಸೂಚನೆಯೊಂದಿಗೆ ಲಗತ್ತಿಸಲಾಗಿದ್ದು, ಅದರಂತೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಂಡು ಶೇ.100 ರಷ್ಟು ದಾಖಲಾತಿಯನ್ನು ಸಾಧಿಸಲು ಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 15:03:2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 14:04:2024

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read