ಗಮನಿಸಿ : ಮಿಲಿಟರಿ ಬಾಲಕಿಯರ ವಸತಿ ನಿಲಯದ ಪ್ರವೇಶಾತಿಗೆ ಮಾಜಿ ಸೈನಿಕರ ಹೆಣ್ಣುಮಕ್ಕಳಿಂದ ಅರ್ಜಿ ಆಹ್ವಾನ

ಬಳ್ಳಾರಿ : ಧಾರವಾಡ ಶಹರದ ಸಪ್ತಾಪುರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕಾಗಿ ಬಳ್ಳಾರಿ ಜಿಲ್ಲೆಯ ಯುದ್ದದಲ್ಲಿ ಮಡಿದ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿಯಿಂದ ಪಿಯುಸಿ-2 ರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ವಸತಿ ನಿಲಯದಲ್ಲಿ ವಾಸ್ತವ್ಯ ಮತ್ತು ಊಟೋಪಚಾರಗಳು ಉಚಿತವಾಗಿದ್ದು, ಮಾಜಿ ಸೈನಿಕರ ಹೆಣ್ಣು ಮಕ್ಕಳು ಈ ಸೌಲಭ್ಯದ ಉಪಯೋಗ ಪಡೆಯಬಹುದು. ವಸತಿ ನಿಲಯದಲ್ಲಿ ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ನಿಲಯದಲ್ಲಿ ಪ್ರವೇಶ ನೀಡಲಾಗುವುದು.

ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಮೇ.10 ರೊಳಗಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೆಲ್ ಸರ್ಕಲ್ ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ ಅಥವಾ ದೂ.0836-2440176 ಗೆ ಸಂಪರ್ಕಿಸಬಹುದು ಎಂದು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read