BIG NEWS : ಪೋಷಕರ ಗಮನಕ್ಕೆ : 1 ನೇ ತರಗತಿ ದಾಖಲಾತಿಗೆ ಈ ಬಾರಿ 6 ವರ್ಷ ಕಡ್ಡಾಯ ಇಲ್ಲ..!

ಬೆಂಗಳೂರು : 1 ನೇ ತರಗತಿ ದಾಖಲಾತಿಗೆ ಈ ಬಾರಿ 6 ವರ್ಷ ಕಡ್ಡಾಯ ಇಲ್ಲ ಎಂದು ಸರ್ಕಾರ ಪೋಷಕರಿಗೆ ತಿಳಿಸಿದೆ.

ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ.

ಶಾಲೆಗೆ ಮಕ್ಕಳನ್ನು ಸೇರಿಸುವಾಗ ಜನನ ಪ್ರಮಾಣಪತ್ರ, ಆಸ್ಪತ್ರೆ ದಾಖಲೆ, ಅಂಗನವಾಡಿ, ಆರೋಗ್ಯ ಸಹಾಯಕಿಯರ ದೃಢೀಕರಣ, ಇಲ್ಲವೇ ಪೋಷಕರು ನೀಡುವ ಸ್ವಯಂ ದೃಢೀಕರಿಸಿದ ಪ್ರಮಾಣ ಪತ್ರ ಸೇರಿದಂತೆ ಯಾವುದಾದರೂ ಒಂದು ದಾಖಲೆ ಸಲ್ಲಿಸಬೇಕು ಎಂದು ಸರ್ಕಾರ ಪೋಷಕರಿಗೆ ತಿಳಿಸಿದೆ.  ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಇಂದಿನಿಂದ ಆರಂಭವಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಮೇ 31 ರಂದು ಏಕಕಾಲದಲ್ಲಿ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read