ರೈಲ್ವೆ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಮಂಗಳೂರು -ಸುಬ್ರಹ್ಮಣ್ಯ ನಡುವಿನ ರೈಲು ಸೇವೆ ತಾತ್ಕಾಲಿಕವಾಗಿ ರದ್ದುಗೊಳಿಸಲಾಗುವುದು.
ರೈಲು ಸಂಖ್ಯೆ 56629 ಮಂಗಳೂರು ಸೆಂಟ್ರಲ್ -ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು ಮಾರ್ಚ್ 23 ರಿಂದ ಏಪ್ರಿಲ್ 14ರ ವರೆಗೆ ರದ್ದಾಗಲಿದೆ. ಜೂನ್ 10ರಿಂದ 21ರವರೆಗೆ ಸೇವೆಯನ್ನು ಮತ್ತೆ ರದ್ದುಗೊಳಿಸಲಾಗುವುದು ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.
ನಿರ್ವಹಣೆ ಕೆಲಸಕ್ಕಾಗಿ ನರಿಮೊಗರು ಮತ್ತು ಪಡೀಲ್ ನಿಲ್ದಾಣಗಳ ನಡುವೆ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು -ಸುಬ್ರಹ್ಮಣ್ಯ ನಡುವಿನ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗುವುದು ಎಂದು ಹೇಳಲಾಗಿದೆ.

