HomeKarnatakaಪ್ರಯಾಣಿಕರ ಗಮನಕ್ಕೆ: ನಾಳೆ ಬೆಳಗ್ಗೆ ಮೆಟ್ರೋ ನೇರಳೆ ಮಾರ್ಗದಲ್ಲಿ 2 ಗಂಟೆ ಸೇವೆ ಸ್ಥಗಿತ

ಪ್ರಯಾಣಿಕರ ಗಮನಕ್ಕೆ: ನಾಳೆ ಬೆಳಗ್ಗೆ ಮೆಟ್ರೋ ನೇರಳೆ ಮಾರ್ಗದಲ್ಲಿ 2 ಗಂಟೆ ಸೇವೆ ಸ್ಥಗಿತ

ಬೆಂಗಳೂರು: ನೇರಳೆ ಮಾರ್ಗದಲ್ಲಿನ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಯವಾಗಲಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ವು ನೇರಳೆ ಮಾರ್ಗದಲ್ಲಿನ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ದಿನಾಂಕ 31ನೇ ಮೇ 2026 (ಭಾನುವಾರ) ರಂದು ಕೈಗೊಳ್ಳಲಾಗುತ್ತಿದೆ.

ಈ ಕಾಮಗಾರಿಗಳನ್ನು ಸುಗಮವಾಗಿ ನಿರ್ವಹಿಸುವ ಉದ್ದೇಶದಿಂದ, ನೇರಳೆ ಮಾರ್ಗದಲ್ಲಿನ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸಂಚಾರವನ್ನು ಬೆಳಿಗ್ಗೆ 07:00 ಗಂಟೆಯಿಂದ 09:00 ಗಂಟೆಯವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಅವಧಿಯಲ್ಲಿ ಮೆಟ್ರೋ ಸೇವೆಗಳು ಸಂಬಂಧಿತ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಗೆ ನಿಯಮಿತ ವೇಳಾಪಟ್ಟಿಯಂತೆ ಪ್ರಾರಂಭವಾಗಿ ಕೆಳಕಂಡ ಮಾರ್ಗಗಳಲ್ಲಿ ಎಂದಿನಂತೆ ಕಾರ್ಯನಿರ್ವಹಿಸಲಿವೆ:

ಚಲಘಟ್ಟ – ಮೈಸೂರು ರಸ್ತೆ

ಕೆಂಪೇಗೌಡ (ಮಜೆಸ್ಟಿಕ್) – ವೈಟೀಲ್ಡ್ (ಕಾಡುಗೋಡಿ)

ಮಾದಾವರ – ಸಿಲ್ಕ್ ಇನ್ಸಿಟ್ಯೂಟ್

ಆರ್.ವಿ. ರಸ್ತೆ – ಬೊಮ್ಮಸಂದ್ರ

ಸಂಪೂರ್ಣ ನೇರಳೆ ಮಾರ್ಗದಲ್ಲಿ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣಗಳ ನಡುವಿನ ಭಾಗವನ್ನು ಒಳಗೊಂಡಂತೆ, ಸಾಮಾನ್ಯ ಮೆಟ್ರೋ ಸೇವೆಗಳು ಬೆಳಿಗ್ಗೆ, 09:00 ಗಂಟೆಯಿಂದ ಪುನರಾರಂಭವಾಗಲಿವೆ.

ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ. ಉಂಟಾಗುವ ಅನಾನುಕೂಲತೆಗೆ ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸುತ್ತದೆ ಹಾಗೂ ಪ್ರಯಾಣಿಕರ ಸಹಕಾರವನ್ನು ಕೋರುತ್ತದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular