HomeKarnatakaಪ್ರಯಾಣಿಕರ ಗಮನಕ್ಕೆ: ಏ. 5ರಂದು 'ನಮ್ಮ ಮೆಟ್ರೋ' ಸೇವೆ 2 ಗಂಟೆ ತಾತ್ಕಾಲಿಕ ಸ್ಥಗಿತ

ಪ್ರಯಾಣಿಕರ ಗಮನಕ್ಕೆ: ಏ. 5ರಂದು ‘ನಮ್ಮ ಮೆಟ್ರೋ’ ಸೇವೆ 2 ಗಂಟೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ನೇರಳೆ ಮಾರ್ಗದಲ್ಲಿ ದಿನಾಂಕ 5ನೇ ಏಪ್ರಿಲ್ 2026(ಭಾನುವಾರ) ಬೆಳಿಗ್ಗೆ 2 ಗಂಟೆಗಳ ಕಾಲ ನಾಡಪ್ರಭು ಕೆಂಪೇಗೌಡ ನಿಲ್ದಾಣ(ಮೆಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ  ಮೆಟ್ರೋ ಸೇವೆ ತಾತ್ಕಾಲಿಕ ಸ್ಥಗಿತವಾಗಲಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು(BMRCL) ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಕೈಗೊಳ್ಳಲಾಗುತ್ತಿದೆ.

ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಬೆಳಿಗೆ, 07:00 ರಿಂದ 09:00 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ಯಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತರ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲಘಟ್ಟ ದಿಂದ ಮೈಸೂರು ರಸ್ತೆ, ನಾಡಪ್ರಭು ಕೆಂಪೇಗೌಡ ನಿಲ್ಯಾಣ-ಮಜೆಸ್ಟಿಕ್ ನಿಂದ ವೈಟೈಲ್ಡ್ (ಕಾಡುಗೋಡಿ): ಮಾದಾವರ ದಿಂದ ರೇಷ್ಮೆ ಸಂಸ್ಥೆ ಮತ್ತು ಆ‌ರ್.ವಿ.ರಸ್ತೆ ಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗೆ, 07:00 ಗಂಟೆಯಿಂದ ವೇಳಾಪಟ್ಟಿಯಂತೆ ಸಂಚರಿಸಲಿವೆ.

ಬೆಳಿಗ್ಗೆ 09:00 ಗಂಟೆಯ ನಂತರ ನಾಡಪ್ರಭು ಕೆಂಪೇಗೌಡ ನಿಲ್ಯಾಣ ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳು ಎಂದಿನಂತೆ ಸಂಚರಿಸಲಿವೆ.

ನಮ್ಮ ಮೆಟ್ರೋ ಪ್ರಯಾಣಿಕರು ಮೇಲೆ ತಿಳಿಸಿರುವ ಬದಲಾವಣೆಗಳನ್ನು ಗಮನಿಸಿ ಸಹಕರಿಸುವಂತೆ ವಿನಂತಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular