HomeLatest Newsಪ್ರಯಾಣಿಕರ ಗಮನಕ್ಕೆ: ರೈಲುಗಳ ಸಂಚಾರ ರದ್ದು, ಸಮಯ ಮರು ನಿಗದಿ

ಪ್ರಯಾಣಿಕರ ಗಮನಕ್ಕೆ: ರೈಲುಗಳ ಸಂಚಾರ ರದ್ದು, ಸಮಯ ಮರು ನಿಗದಿ

ಹಾಸನ ಮತ್ತು ಮಾವಿನಕೆರೆ ರೈಲು ನಿಲ್ದಾಣಗಳ ನಡುವೆ ಕೆಳಸೇತುವೆ(ಆರ್‌ಯುಬಿ) ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ರದ್ದು:

ಮಾರ್ಚ್ 16ರಂದು ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್, ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾಗಶಃ ರದ್ದು:

ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮಾರ್ಚ್ 16ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಸಂಚರಿಸುವುದಿಲ್ಲ. ಅಂದು ಈ ರೈಲು ಮೈಸೂರಿನ ಬದಲಿಗೆ ಅರಸೀಕೆರೆಯಿಂದಲೇ ತನ್ನ ಪ್ರಯಾಣ ಆರಂಭಿಸಲಿದೆ.

ನಿಯಂತ್ರಣ:

ಮಾ. 10 ರಂದು ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್ (16206) ಮಾರ್ಗಮಧ್ಯೆ 25 ನಿಮಿಷ ನಿಯಂತ್ರಣವಾಗಲಿದೆ. ಮಾ. 16 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) 70 ನಿಮಿಷ ಹಾಗೂ ಮೈಸೂರು–ಯಶವಂತಪುರ ಎಕ್ಸ್‌ಪ್ರೆಸ್ (16208) 30 ನಿಮಿಷ ಮಾರ್ಗಮಧ್ಯೆ ತಡೆಹಿಡಿಯಲಾಗುವುದು.

ಸಮಯ ಮರುನಿಗದಿ:

ಮಾರ್ಚ್ 10ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56267) ಮತ್ತು ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ (16225) ರೈಲುಗಳು ನಿಗದಿತ ಸಮಯಕ್ಕಿಂತ 90 ನಿಮಿಷ ತಡವಾಗಿ ಹೊರಡಲಿವೆ.

ಅದೇ ರೀತಿ, ಮಾರ್ಚ್ 16ರಂದು ಅರಸೀಕೆರೆ–ಮೈಸೂರು ಪ್ಯಾಸೆಂಜರ್ (56265) ಮತ್ತು ಮೈಸೂರು–ಎಸ್‌ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269) ರೈಲುಗಳು ನಿಗದಿತ ಸಮಯಕ್ಕಿಂತ 60 ನಿಮಿಷ ತಡವಾಗಿ ಸಂಚರಿಸಲಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular