ಬೆಂಗಳೂರು: ರಾಜ್ಯದಾದ್ಯಂತ ಸಾರ್ವಜನಿಕರು ತುರ್ತು ಸಂದರ್ಭಗಳಲ್ಲಿ ಅಥವಾ ದೂರುಗಳನ್ನು ನೀಡಲು ಆಯಾ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳನ್ನು (SP) ಸುಲಭವಾಗಿ ಸಂಪರ್ಕಿಸಲು ಅನುಕೂಲವಾಗುವಂತೆ ಅಧಿಕೃತ ದೂರವಾಣಿ ಸಂಖ್ಯೆ ಹಾಗೂ ಇ-ಮೇಲ್ ವಿಳಾಸಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಪ್ರತಿಯೊಂದು ಜಿಲ್ಲೆಯ ಎಸ್‌ಪಿ ಅವರ ಕಚೇರಿ ಮತ್ತು ಮೊಬೈಲ್ ಸಂಖ್ಯೆಗಳನ್ನು ನೀಡಲಾಗಿದ್ದು, ಸಾರ್ವಜನಿಕರು ನೇರವಾಗಿ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.ದೂರುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಲು ಬಯಸುವವರು [email protected] ಮಾದರಿಯ ಅಧಿಕೃತ ಇ-ಮೇಲ್ ಐಡಿಗಳನ್ನು ಬಳಸಬಹುದು.ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ನಾಗರಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ನಿಟ್ಟಿನಲ್ಲಿ ಈ ಮಾಹಿತಿ ಅತ್ಯಂತ ಸಹಕಾರಿಯಾಗಿದೆ.


