HomeKarnatakaವಿಕಲಚೇತನರ ಗಮನಕ್ಕೆ : ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಗಮನಕ್ಕೆ : ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಜಿಲ್ಲೆಯಲ್ಲಿನ ಸೆರೆಬ್ರಲ್ ಪಾಲ್ಸಿ, ಮಸ್ಕಲರ್ ಡೈಸ್ಟ್ರೋಫಿ, ಪಾರ್ಕಿನ್ಸನ್ಸ್ ಮತ್ತು ಮಲ್ಟಿಪಲ್ ಸ್ಕೆರೋಸಿಸ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ರೂ. 1000/-ಗಳ ಪ್ರೋತ್ಸಾಹಧನವನ್ನು ನೀಡುವ ಯೋಜನೆಯಡಿ ಅರ್ಜಿ ಆಹ್ವಾನಿಸಿದೆ.

ಆರ್ಹರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿ.ಆರ್.ಡಬ್ಲ್ಯೂ) ಹಾಗೂ ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ) ಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಎಲ್ಲಾ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅ. 30 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲೂಕು ಶ್ರೀಧರ (ವಿ.ಆರ್.ಡಬ್ಲ್ಯೂ)-9880972583, ಸುಮ (ಯು.ಆರ್.ಡಬ್ಲ್ಯೂ)-8746997896, ಭದ್ರಾವತಿ ತಾಲೂಕು, ದಿನೇಶ-7899137243, ಶಿಕಾರಿಪುರ ತಾಲೂಕು, ಹುಚ್ಚರಾಯಪ್ಪ ಎಂ.-9741161346, ಸಾಗರ ತಾಲೂಕು, ಶ್ಯಾಮ್ಸುಂದರ್-9535247757, ಸೊರಬ-ಭರತ್ಕುಮಾರ್ ಹೆಚ್.ಸಿ.-9110493122, ತೀರ್ಥಹಳ್ಳಿ ತಾಲೂಕು, ದಿವಾಕರ ಬಿ.-9480767638 ಹಾಗೂ ಹೊಸನಗರ ತಾಲೂಕು, ರವಿಕುಮಾರ್-9731922693 ಇವರುಗಳನ್ನು ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular