HomeKarnatakaPh.D ಅಭ್ಯರ್ಥಿಗಳ ಗಮನಕ್ಕೆ : ಫೆಲೋಶಿಪ್ ಗೆ ಅರ್ಜಿ ಆಹ್ವಾನ

Ph.D ಅಭ್ಯರ್ಥಿಗಳ ಗಮನಕ್ಕೆ : ಫೆಲೋಶಿಪ್ ಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್ ಗೆ  ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳು 2023-24ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ವಿವರಗಳು ಇಲಾಖಾ ವೆಬ್ಸೈಟ್ https://bcwd.karnataka.gov.in ನಲ್ಲಿ ಲಭ್ಯವಿದ್ದು, ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆ : 8050770004 ಹಾಗೂ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿ ದೂವಾಣಿ ಸಂಖ್ಯೆ : 08182-222129 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular