HomeKarnatakaಬೆಂಗಳೂರಿನ ‘ಆಸ್ತಿ ಮಾಲೀಕ’ರ ಗಮನಕ್ಕೆ ; ‘OTS’ ಯೋಜನೆ ಸೆ. 30 ಕ್ಕೆ ಮುಕ್ತಾಯ.!

ಬೆಂಗಳೂರಿನ ‘ಆಸ್ತಿ ಮಾಲೀಕ’ರ ಗಮನಕ್ಕೆ ; ‘OTS’ ಯೋಜನೆ ಸೆ. 30 ಕ್ಕೆ ಮುಕ್ತಾಯ.!

ಬೆಂಗಳೂರು : ಆಸ್ತಿ ಮಾಲೀಕರ ಗಮನಕ್ಕೆ…ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆಯು ಸೆ.30 ಕ್ಕೆ ಮುಕ್ತಾಯಗೊಳ್ಳಲಿದೆ.

ಈ ಯೋಜನೆ ಅಡಿಯಲ್ಲಿ ಬಾಕಿ ಇರುವ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುತ್ತಿದೆ. ಬೆಂಗಳೂರಿನ ನಾಗರಿಕರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

ಆನ್ಲೈನ್ ಮೂಲಕ ಪಾವತಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ(https://bbmptax.karnataka.gov.in/
ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸುವರ್ಣಾವಕಾಶವು ಸೆ.30 ರಂದು ಕೊನೆಗೊಳ್ಳಲಿದೆ. ಜೀವಮಾನದಲ್ಲಿ ಒಮ್ಮೆ ಮಾತ್ರ ಈ ಯೋಜನೆಯ ಅವಕಾಶವಿದ್ದು, ಇದರ ವಿಸ್ತರಣೆ ಇರುವುದಿಲ್ಲ. ಈ ಅವಕಾಶವನ್ನು ಬಳಸಿಕೊಂಡು ನಿಮ್ಮ ಸ್ವತ್ತಿನ ಬಾಕಿ ಆಸ್ತಿತೆರಿಗೆಯನ್ನು ಪಾವತಿಸಬೇಕೆಂದು ಕೋರುತ್ತೇನೆ. ಬಿಬಿಎಂಪಿ ಕಾಯ್ದೆಯಲ್ಲಿ ಆಸ್ತಿತೆರಿಗೆ ಬಾಕಿ ವಸೂಲಾತಿಗೆ ಅವಕಾಶವಿದೆ. ಆದಾಗ್ಯೂ, ಒಟಿಎಸ್ ನಾಗರಿಕರಿಗೆ ಸಹಾಯ ಮಾಡಲು ಸರ್ಕಾರ ಮತ್ತು ಬಿಬಿಎಂಪಿಯೂ ಜೊತೆಯಾಗಿ ಕಾರ್ಯನಿರ್ವಹಿಸಲಿದೆ .ನಾಗರಿಕರು https://bbmptax.karnataka.gov.in ಮೂಲಕ ಆನ್ಲೈನ್ ನಲ್ಲಿ ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಬಹುದು ಎಂದು ಪ್ರಕಟಣೆ ಹೊರಡಿಸಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular