ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಸಾರ್ವಜನಿಕರೇ ಗಮನಿಸಿ… ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ಸಿಎಂ ಸಿದ್ದರಾಮಯ್ಯರ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka `ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ.

ಜನರ ಸಮಸ್ಯೆಗೆ ಪರಿಹಾರ

ಸಮಸ್ಯೆ 1) ಬೀದರ್ ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಮೊರಾರ್ಜಿ ದೇಸಾಯಿ ಶಾಲೆಯಲ್ಲಿನ ವಿದ್ಯಾರ್ಥಿಗಳು ತಮಗೆ ಮೆನು ಪ್ರಕಾರ ಊಟ ನೀಡದೇ ಇರುವುದನ್ನು ಪ್ರಶ್ನಿಸಿದ್ದಕ್ಕೆ ವಾರ್ಡನ್ ಥಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಸ್ಪಂದಿಸಿದ್ದು, ಪರಿಶೀಲನೆ ನಡೆಸಿ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಪ್ರಾಂಶುಪಾಲರು ಹಾಗೂ ವಾರ್ಡನ್ ಕರ್ತವ್ಯಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಸಮಸ್ಯೆ 2) ಚಿತ್ರದುರ್ಗದ ಕ್ಯಾದಿಗೆರೆ ಗ್ರಾಮಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ನಿತ್ಯ 3 ಕಿ.ಮೀ. ನಡೆದುಕೊಂಡೇ ಶಾಲೆಗೆ ಹೋಗಬೇಕು. ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸುವಂತೆ ʼಎಕ್ಸ್ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗಕ್ಕೆ ಕೋರಿದ್ದರು. ಕೂಡಲೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಶಾಲಾ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಚಿತ್ರದುರ್ಗ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಸಮಸ್ಯೆ

3) ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮದನೂರ – ಖತಗಾಂವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಪಕ್ಕದಲ್ಲಿ ಮುಳ್ಳಿನ ಜಾಲಿ ಗಿಡಗಳು ಬೆಳೆದು ನಿಂತಿದ್ದು, ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಸದರಿ ರಸ್ತೆಯ ಸುಧಾರಣೆಗಾಗಿ 2024-25ನೇ ಸಾಲಿನ ಟಿ.ಎಫ್.ಸಿ. ಕ್ರಿಯಾ ಯೋಜನೆಯು ಮಂಜೂರಾದ ನಂತರ ಆದ್ಯತೆ ಮೇರೆಗೆ ದುರಸ್ತಿಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಮಾಡಿಕೊಡಲಾಗುವುದು ಎಂದು ಔರಾದ ಪಂ.ರಾ.ಇಂ. ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಸಾರ್ವಜನಿಕರೇ ಗಮನಿಸಿ…ಹೀಗೆ ನಿಮ್ಮೂರಿನ ಸಮಸ್ಯೆಗಳನ್ನು ಸಿಎಂ ಸಿದ್ದರಾಮಯ್ಯರ ಎಕ್ಸ್ ಖಾತೆ @osd_cmkarnataka  ಟ್ಯಾಗ್ ಮಾಡಿ ಬಗೆಹರಿಸಿಕೊಳ್ಳಬಹುದಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read