ಸಾರ್ವಜನಿಕರೇ ಗಮನಿಸಿ : ಬೆಂಗಳೂರಿನಲ್ಲಿ ನಾಳೆ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಸಭೆ.!

ಬೆಂಗಳೂರು : ರಾಜ್ಯದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಅವರು ಅಕ್ಟೋಬರ್ 24 ಹಾಗೂ 25 ರಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಯಲಹಂಕ ಉಪ ನಗರದಲ್ಲಿರುವ ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಯಲಹಂಕ ಹಾಗೂ ಬೆಂಗಳೂರು ಪೂರ್ವ ತಾಲೂಕುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದು ಕೊರತೆ, ದೂರು ವಿಚಾರಣೆ ಹಾಗೂ ವಿವಿಧ ಪ್ರಕರಣಗಳ ವಿಲೇವಾರಿಗೆ ಸಂಬಂಧಿಸಿದಂತೆ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ನಾಳೆ (ಅಕ್ಟೋಬರ್ 24) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ರ ವರೆಗೆ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ನ್ಯಾಯಮೂರ್ತಿಗಳು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ನಡೆಯಲಿರುವ ‘ಕರ್ನಾಟಕ ಲೋಕಾಯುಕ್ತ ಕಾಯ್ದೆ’ ಕುರಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಹವಾಲು ಸ್ವೀಕಾರ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read