SC, ST ವರ್ಗದವರ ಗಮನಕ್ಕೆ : ಪಂಚಕರ್ಮ ಮಸಾಜಿಸ್ಟ್ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ : ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆ (ಎಸ್‍ಸಿಪಿ, ಟಿಎಸ್‍ಪಿ) ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಯುವಕ ಮತ್ತು ಯುವತಿಯರಿಗೆ 02 ತಿಂಗಳ ಆಯುರ್ವೇದೀಯ ಪಂಚಕರ್ಮ ಮಸಾಜಿಸ್ಟ್ ತರಬೇತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾದ 18ರಿಂದ 35 ವರ್ಷ ವಯೋಮಿತಿಯ ಎಸ್‍ಸಿ, ಎಸ್‍ಟಿ ಅಭ್ಯರ್ಥಿಗಳು ಡಿ.15 ರೊಳಗಾಗಿ ಅರ್ಜಿ ಸಲ್ಲಿಸಬೇಕು, ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಚೇರಿ ದೂ.08392-260273 ಹಾಗೂ ಕೋ-ಆರ್ಡಿನೇಟರ್ ಡಾ.ದೊಡ್ಡಬಸಯ್ಯ ಅವರ ಮೊ.9986916015ಗೆ ಸಂಪರ್ಕಿಸಬಹುದು ಎಂದು ತಾರಾನಾಥ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read