SC, ST ವಿದ್ಯಾರ್ಥಿಗಳ ಗಮನಕ್ಕೆ : ಸಾಮರ್ಥ್ಯ ವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಸಮಾಜ ಕಲ್ಯಾಣ ಇಲಾಖೆಯಿಂದ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈಗಾಗಲೇ ಅಂತಿಮ ವರ್ಷ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ C-DAC (CENTRE FOR HPC DEVELOPMENT OF ADVANCED COMPUTING) ಸಂಸ್ಥೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಇ, ಬಿ.ಟೆಕ್, ಬಿ.ಎಸ್ಸಿ, ಬಿಸಿಎ ಹಾಗೂ ಎಂಸಿಎ, ಎಂಎಸ್ಸಿ ಪದವೀಧರರಿಗೆ ಡಿಪ್ಲೋಮಾ ಕೋರ್ಸ್‌ ಅಡಿ 06 ತಿಂಗಳ ಸಾಮರ್ಥ್ಯ ವೃದ್ಧಿ ತರಬೇತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಅವಧಿಯಲ್ಲಿ ಮಾಸಿಕ ರೂ.10 ಸಾವಿರಗಳ ಭತ್ಯೆ ನೀಡಲಾಗುವುದು. ಹಾಗೂ ವಿಫುಲ ಉದ್ಯೋಗವಕಾಶ ನೀಡಲಾಗುತ್ತದೆ.

2022-23 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಿಇ, ಬಿ.ಟೆಕ್, ಬಿ.ಎಸ್ಸಿ, ಬಿಸಿಎ ಹಾಗೂ ಎಂಸಿಎ, ಎಂಎಸ್ಸಿ ಪದವೀಧರರು ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಅಂತಿಮ ವರ್ಷದಲ್ಲಿ ಸದರಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ನಗರದ ಕೋಟೆ ಪ್ರದೇಶದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read