HomeLatest News'ದ್ವಿತೀಯ PUC' ವಿದ್ಯಾರ್ಥಿಗಳ ಗಮನಕ್ಕೆ : ಫಲಿತಾಂಶದ ಕುರಿತು ಸಚಿವ ಮಧು ಬಂಗಾರಪ್ಪ ಮಹತ್ವದ ಪ್ರಕಟಣೆ

‘ದ್ವಿತೀಯ PUC’ ವಿದ್ಯಾರ್ಥಿಗಳ ಗಮನಕ್ಕೆ : ಫಲಿತಾಂಶದ ಕುರಿತು ಸಚಿವ ಮಧು ಬಂಗಾರಪ್ಪ ಮಹತ್ವದ ಪ್ರಕಟಣೆ

ಬೆಂಗಳೂರು: 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ನಾಳೆ, ಅಂದರೆ ಏಪ್ರಿಲ್ 09 ರಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಫಲಿತಾಂಶ ಹೊರಬೀಳಲಿದೆ.

ಈ ಬಾರಿ ವಿಶೇಷವಾಗಿ ಶಾಲಾ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಡಿಜಿಲಾಕರ್ (DigiLocker) ಮೂಲಕ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳುವ ಹೊಸ ವ್ಯವಸ್ಥೆಯನ್ನು ಪರಿಚಯಿಸಿದೆ. ವಿದ್ಯಾರ್ಥಿಗಳು ಎಂದಿನಂತೆ ಅಧಿಕೃತ ವೆಬ್‌ಸೈಟ್ ಹಾಗೂ ಮೊಬೈಲ್ ಆಪ್ ಮೂಲಕವೂ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಗಮನಕ್ಕೆ.! 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ದಿನಾಂಕ 09/04/2026 ರಂದು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು.ಶಾಲಾ ಶಿಕ್ಷಣ ಇಲಾಖೆ ಪ್ರಪ್ರಥಮ ಬಾರಿಗೆ ಡಿಜಿಲಾಕರ್ (DigiLocker) ಮೂಲಕ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಿದೆ. ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ…! ಫಲಿತಾಂಶ ವೀಕ್ಷಿಸಲು https://karresults.nic.in ಅಥವಾ Karnataka one mobile app ಮೂಲಕ ಪಡೆಯಬಹುದಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಣೆ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫಲಿತಾಂಶ ವೀಕ್ಷಿಸುವುದು ಹೇಗೆ?

  • ಅಧಿಕೃತ ವೆಬ್‌ಸೈಟ್: https://karresults.nic.in
  • ಮೊಬೈಲ್ ಆಪ್: ಕರ್ನಾಟಕ ಒನ್ (Karnataka One)
  • ಅಂಕಪಟ್ಟಿ: ಡಿಜಿಲಾಕರ್ ಮೂಲಕ ಸುಲಭವಾಗಿ ಪಡೆಯಬಹುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular