‘ದ್ವಿತೀಯ PUC’ ವಿದ್ಯಾರ್ಥಿಗಳ ಗಮನಕ್ಕೆ : ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಶುಲ್ಕ ಎಷ್ಟು.? ಇಲ್ಲಿದೆ ಮಾಹಿತಿ

ಬೆಂಗಳೂರು : ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಏ.20 ರವರೆಗೆ ಕಾಲಾವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ, ಡೌನ್ಲೋಡ್ ಮಾಡಿಕೊಳ್ಳಲು ಹಾಗೂ ಮರು ಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ: ಸ್ಕ್ಯಾನ್ ಪ್ರತಿ ಹಾಗೂ ಮರುಮೌಲ್ಯಮಾಪನ ಶುಲ್ಕವನ್ನು ಪಾವತಿಸಲು ಆನ್‌ಲೈನ್ ನಲ್ಲಿ ಮತ್ತು ಆಫ್‌ಲೈನ್ ನಲ್ಲಿ ಚಲನ್ ಮುಖಾಂತರ ಪಾವತಿ ಸೌಲಭ್ಯ ಲಭ್ಯವಿರುತ್ತದೆ.

ವಿಶೇಷ ಸೂಚನೆಗಳು

• ಯಾವುದೇ ಅಭ್ಯರ್ಥಿಗಳು ಪರೀಕ್ಷೆ -2ಕ್ಕೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಾಗಿಲ್ಲ.

ಯಾವುದೇ ಸಂದರ್ಭದಲ್ಲಿ, “ಕರ್ನಾಟಕ ಪ್ರಿ-ಯೂನಿವರ್ಸಿಟಿ ಕೋರ್ಸ್ ಎಸ್ ಎಲ್ ಪಿ ಇ 1997, 29 (ಎ)” ಪ್ರಕಾರ ಈ ಹಿಂದೆ ಗಳಿಸಿದ ಅಂಕಗಳನ್ನು ಮರುಮೌಲ್ಯಮಾಪನದ ನಂತರ ಮರುಸ್ಥಾಪಿಸಲು ಸಾಧ್ಯವಿಲ್ಲ. ಮರುಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳೇ ಪರೀಕ್ಷೆ-1ರ ಅಂಕಗಳೆ ಪರಿಗಣಿಸಲಾಗುವುದು.

ಮರುಮೌಲ್ಯಮಾಪಕರ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಮತ್ತು ಈ ಬಗ್ಗೆ ಯಾವುದೇ ಮೇಲ್ಮನವಿಗಳಿಗೆ ಅವಕಾಶವಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read