ಕ್ರೀಡಾಪಟುಗಳೇ ಗಮನಿಸಿ : ವಿವಿಧ ಕ್ರೀಡಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023 ನೇ ಸಾಲಿನ ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ, ಅರ್ಜುನ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್ಚಂದ್ ಪ್ರಶಸ್ತಿ, ರಾಷ್ಟ್ರೀಯ ಖೇಲ್ ರತ್ನ ಪುರಸ್ಕಾರ ಮತ್ತು ಮೌಲಾನ ಅಬ್ದುಲ್ ಕಲಾಂ ಆಜಾದ್ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗಳನ್ನು ಕ್ರೀಡಾ ಅಭಿವೃದ್ಧಿ ಕ್ಷೇತ್ರದಲ್ಲಿ ಕ್ರೀಡಾಪಟುಗಳು, ತರಬೇತುದಾರರು, ಘಟಕಗಳು ಮತ್ತು ವಿಶ್ವವಿದ್ಯಾಲಯಗಳಿಗೆ ನೀಡಲಾಗುತ್ತಿದ್ದು, ಅರ್ಹ ಕ್ರೀಡಾಪಟುಗಳಿಂದ 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಾಗಿ ಸಚಿವಾಲಯವು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.

ಅ.04 ರಂದು ಮೀಸಲಾದ ಆನ್ಲೈನ್ ಪೋರ್ಟಲ್ ನಲ್ಲಿ ತರಬೇತುದಾರರು, ಘಟಕಗಳು ಮತ್ತು ವಿಶ್ವವಿದ್ಯಾಲಯಗಳು ಅರ್ಜಿಯನ್ನು ನ.10 ರೊಳಗಾಗಿ ಸಲ್ಲಿಸಬೇಕಾಗಿರುತ್ತದೆ.
ಆನ್ಲೈನ್ ಅರ್ಜಿ ನಮೂನೆಯಲ್ಲಿ ಯಾವುದೇ ಸಸಮಸ್ಯೆಗಳು ಎದುರಾದರೆ, ಅರ್ಜಿದಾರರು ಕ್ರೀಡಾ ಇಲಾಖೆ ದೂರವಾಣಿ ಸಂಖ್ಯೆ : 011-23387432 ಮತ್ತು ಟೋಲ್ ಫ್ರೀ ಸಂಖ್ಯೆ : 1800-202-5155 ಮತ್ತು 1800-258-5155 ಗೆ ಕರೆ ಮಾಡಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read