HomeLatest NewsBIG NEWS : ರಾಜ್ಯದ 'SSLC' ವಿದ್ಯಾರ್ಥಿಗಳೇ ಗಮನಿಸಿ : ಪರೀಕ್ಷೆ-2 ರ ಮರುಎಣಿಕೆ, ಮರುಮೌಲ್ಯಮಾಪನಕ್ಕೆ...

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : ಪರೀಕ್ಷೆ-2 ರ ಮರುಎಣಿಕೆ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಬೆಂಗಳೂರು : 2025ನೇ ಮೇ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಮರುಎಣಿಕೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ.

ಮೇ 2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವದಿಯನ್ನು ದಿನಾಂಕ:19.06.2025ರವರೆಗೆ ನಿಗದಿಗೊಳಿಸಲಾಗಿತ್ತು. ಆದರೆ ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ ದಿನಾಂಕಗಳನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ. ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಮುಖ್ಯೋಪಾಧ್ಯಾಯರ ಮುಖಾಂತರ ವಿದ್ಯಾರ್ಥಿಗಳ/ಪೋಷಕರ ಗಮನಕ್ಕೆ ತಂದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು / ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular