ಬೆಂಗಳೂರು : 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ನೋಂದಾಯಿಕೊಂಡು ಪರೀಕ್ಷೆಗೆ ಗೈರು ಹಾಜರಾದ /ಪೂರ್ಣಗೊಳಿಸದ [Not Completed] / ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2025ರ ಮೇ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- 2023ರ ಪೂರಕ ಪರೀಕ್ಷೆಗೆ ನೋಂದಾಯಿಸಿದ್ದ ಮತ್ತು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ಣಗೊಳಿಸದ [Not Completed], 2025ರ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಗೈರು ಹಾಜರಾಗಿರುವ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ https://kseab.karnataka.gov.in ៨ ឆាយ បារ៉ា ដ ដ-2층 ನೋಂದಣಿ ಮಾಡುವುದು, ಶಾಲಾ ಲಾಗಿನ್ನಲ್ಲಿ Registration for 2025 Exam-2ನ್ನು ಕ್ಲಿಕ್ ಮಾಡಿದಾಗ ENTER REGISTER NUMBER ಎನ್ನುವ ಆಯ್ಕೆ ದೊರಕುತ್ತದೆ. ಈ ಆಯ್ಕೆಯಲ್ಲಿ ವಿದ್ಯಾರ್ಥಿಗಳ ನೋಂದಣೆ ಸಂಖ್ಯೆಯನ್ನು ನಮೂದು ಮಾಡಲು ಅವಕಾಶ ನೀಡಲಾಗಿದೆ. ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಯ ನೋಂದಣಿ ಸಂಖ್ಯೆಯನ್ನು ನಮೂದು ಮಾಡಿ Submit ಕೊಟ್ಟಾಗ ಆ ವಿದ್ಯಾರ್ಥಿಯ ವಿವರಗಳು, ವಿದ್ಯಾರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಮಾಧ್ಯಮ, ದೈಹಿಕ ಸ್ಥಿತಿ, ಜನ್ಮ ದಿನಾಂಕ, ಪರೀಕ್ಷೆ ತೆಗೆದುಕೊಳ್ಳುತ್ತಿರುವ ವಿಷಯಗಳು ತೆರೆದುಕೊಳ್ಳುತ್ತವೆ. ಪುನರಾವರ್ತಿತ ಅಭ್ಯರ್ಥಿಗಳಿಗೆ ಇವುಗಳಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ. ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ತಾವು ಇಚ್ಚಿಸುವ ವಿಷಯಗಳ ಪರೀಕ್ಷೆ ಬರೆಯಲು ವಿಷಯಗಳನ್ನು ಆಯ್ಕೆಮಾಡಿಕೊಳ್ಳಲು ಅವಕಾಶವಿರುತ್ತದೆ.
- 023ರ ಪೂರಕ ಪರೀಕ್ಷೆ ಮತ್ತು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳ ಹಾಗೂ ಮಾರ್ಚ್/ಏಪ್ರಿಲ್ 2025ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಂಡು ಪೂರ್ಣಗೊಳಿಸದ [Not Completed) ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ಭಾವಚಿತ್ರ ಮತ್ತು ಸಹಿಗಳು ಮಂಡಳಿಯಲ್ಲಿ ಲಭ್ಯವಿದ್ದು, ಸದರಿ ಅಭ್ಯರ್ಥಿಗಳು ಗಳು ಈ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಲ್ಲಿ ಪುನ: ಇವರುಗಳ ಭಾವಚಿತ್ರ ಮತ್ತು ಸಹಿಗಳನ್ನು ಅಪ್ಲೋಡ್ ಮಾಡುವ ಅವಶ್ಯಕತೆ ಇರುವುದಿಲ್ಲ.
- ಮಂಡಳಿ ನಿಗದಿಪಡಿಸಿರುವ ಅಂತಿಮ ದಿನಾಂಕ “ಸಾರ್ವತ್ರಿಕ ರಜಾ ದಿನ” ಎಂಬುದಾಗಿ ಘೋಷಿಸಿದ್ದಲ್ಲಿ ಮಾರನೇ ಕೆಲಸದ ದಿನವನ್ನು ಕೊನೆಯ ದಿನಾಂಕವೆಂದು ಪರಿಗಣಿಸುವುದು.



You Might Also Like
TAGGED:SSLC' ವಿದ್ಯಾರ್ಥಿ