ಬೆಂಗಳೂರು : ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ – 2 ಇದೇ ಮೇ 26 ರಿಂದ ಜೂನ್ 2ರ ವರೆಗೆ ನಡೆಯಲಿದೆ. ಅನುತ್ತೀರ್ಣರಾದವರು, ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವವರು, ಖಾಸಗಿಯಾಗಿ ಪರೀಕ್ಷೆ ತೆಗೆದುಕೊಳ್ಳುವವರು ಮೇ 10ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು ಎಂದು ಪ್ರಕಟಣೆ ಹೊರಡಿಸಿದೆ.
ಪರೀಕ್ಷೆ – 1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಇರುವುದಿಲ್ಲ. ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವವರು ಶುಲ್ಕ ಪಾವತಿಸಬೇಕು ಎಂದು ಪ್ರಕಟಣೆ ಹೊರಡಿಸಿದೆ. ಪ್ರಥಮ ಬಾರಿಗೆ ಪರೀಕ್ಷೆಗೆ ನೋಂದಣಿಯಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದ್ದು, ವಿದ್ಯಾರ್ಥಿಗಳು ಮೇ 10 ರೊಳಗಾಗಿ ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
You Might Also Like
TAGGED:SSLC' ವಿದ್ಯಾರ್ಥಿ