ಬೆಂಗಳೂರು : 2024 ಮತ್ತು 2025ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಸಲ್ಲಿಸುವ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ “ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ನಾಮನಿರ್ದೇಶನವನ್ನು ಸಲ್ಲಿಸುವ ಅವಧಿಯನ್ನು ದಿನಾಂಕ: 14-04-2025 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಇನ್ನೂ ಹೆಚ್ಚಿನ ಸಂಖ್ಯೆಯ ಅಧಿಕಾರಿ/ನೌಕರರು ನಾಮನಿರ್ದೇಶನಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ, ಸದರಿ ಅವಧಿಯನ್ನು ದಿನಾಂಕ: 31-05-2025 ರವರೆಗೆ ವಿಸ್ತರಿಸಲಾಗಿದೆ.. ಯಾವುದೇ ಕಾರಣಕ್ಕೂ ಕಾಲಾವಧಿಯನ್ನು ನಂತರ ವಿಸ್ತರಿಸಲಾಗುವುದಿಲ್ಲ ಎಂದು ತಿಳಿಸಿದೆ.

You Might Also Like
TAGGED:ಸರ್ವೋತ್ತಮ ಸೇವಾ ಪ್ರಶಸ್ತಿ