ಬೆಂಗಳೂರು : ರಾಜ್ಯದ ವಾಹನ ಸವಾರರೇ ಗಮನಿಸಿ.! ಶೇ.50 ರಷ್ಟು ರಿಯಾಯಿತಿ ದರದಲ್ಲಿ ಟ್ರಾಫಿಕ್ ದಂಡ ಪಾವತಿಸಲು ಸೆ.12 ಕೊನೆಯ ದಿನವಾಗಿದೆ.
ಹೌದು, ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಕಳೆದ ತಿಂಗಳು ಆದೇಶ ಹೊರಡಿಸಿತ್ತು. .50 ರಷ್ಟು ರಿಯಾಯಿತಿ ದರದಲ್ಲಿ ಟ್ರಾಫಿಕ್ ದಂಡ ಪಾವತಿಸಲು ಸೆ.12 ಕೊನೆಯ ದಿನವಾಗಿದೆ. ನಂತರ ನೀವು ದಂಡ ಕಟ್ಟಲು ಹೋದರೆ ಶೇ.100 % ದಂಡ ಪಾವತಿಸಬೇಕು. ಈಗ ಆದರೆ ಶೇ.50 ರಷ್ಟು ಮಾತ್ರ ಕಟ್ಟಿದ್ದರೆ ಸಾಕು.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಿದೆ.ಈ ರಿಯಾಯಿತಿಯು ದಿನಾಂಕ:23.08.2025 ರಿಂದ 12.09.2025ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.ಈ ಆದೇಶವನ್ನು ಆರ್ಥಿಕ ಇಲಾಖೆಯು ಅನಧಿಕೃತ ಟಿಪ್ಪಣಿ ಸಂಖ್ಯೆ ಆಇ 52 ವೆಚ್ಚ-11 2023 ದಿನಾಂಕ:02.08.2025 ಮತ್ತು ದಿನಾಂಕ:16.08.2025 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ.

