HomeLatest NewsBIG NEWS : ರಾಜ್ಯದ 'ಪಡಿತರ ಚೀಟಿ'ದಾರರೇ ಗಮನಿಸಿ : ಏ.30 ರೊಳಗೆ ತಪ್ಪದೇ ಈ...

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ಏ.30 ರೊಳಗೆ ತಪ್ಪದೇ ಈ ಕೆಲಸ ಮಾಡುವಂತೆ ಸರ್ಕಾರ ಸೂಚನೆ.!

ಬೆಂಗಳೂರು : ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.

ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಏ.30 ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ.

ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular