HomeKarnatakaBIG NEWS : ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ...

BIG NEWS : ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿಯುಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪುವೇಶಕ್ಕಾಗಿ ಹೊಸದಾಗಿ ಪುವೇಶ ಬಯಸುವ ಪ.ಜಾ/ಪ.ವರ್ಗದ ಹಾಗೂ ಪವರ್ಗ-1, 2ಎ, 2ಬಿ, 3ಎ, 3ಬಿ, ಮತ್ತು ಇತರ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್.ಸಿ & ಎಸ್.ಟಿ, ಪವರ್ಗ-1 ರೂ.2.50 ಲಕ್ಷ. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷದೊಳಗಿರಬೇಕು. ವಿದ್ಯಾರ್ಥಿಗಳು https://shp,karnataka.gov.in ಅನ್ನು ಸಂಪರ್ಕಿಸಿ ಆನ್ ಲೈನ್ ಅರ್ಜಿಯನ್ನು ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.07.2023 ಆಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ ವೀಕ್ಷಿಸಿ

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ, ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://sw.kar.nic.in/ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಅಥವಾ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲೆಗಳ ಜಂಟಿ/ಉಪ ನಿರ್ದೇಶಕರು ಹಾಗೂ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳು, ಸಮಾಜ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9482300400 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದೆ.

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular