HomeKarnatakaBIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 'ಶುಲ್ಕವಿನಾಯ್ತಿ' ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ...

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಶುಲ್ಕವಿನಾಯ್ತಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ಮಾ. 15 ರವರೆಗೆ ವಿಸ್ತರಣೆ

2023-24 ನೇ ಸಾಲಿನಲ್ಲಿ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮತ್ತು ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾದ ಕೋರ್ಸುಗಳು ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ನೀಡದ ಕೋರ್ಸುಗಳ ಅರ್ಜಿ ಸಲ್ಲಿಸದಿರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ ಶುಲ್ಕವಿನಾಯ್ತಿ ಸೌಲಭ್ಯಕ್ಕಾಗಿ” ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://bcwd.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಗಾಗಿ ಇಲಾಖೆಯ ವೆಬ್ಸೈಟ್ [email protected] ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ 8050770005 ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: [email protected] ದೂರವಾಣಿ ಸಂಖ್ಯೆ: 08272-295628 ಸಂಪರ್ಕಿಸಬಹುದು. ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular