HomeLatest Newsರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ, ಶುಲ್ಕ ವಿನಾಯಿತಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾಸಿರಿ, ಶುಲ್ಕ ವಿನಾಯಿತಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು :  ಪ್ರಸಕ್ತ (2025-26) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿಯುಸಿ ಹೊರತುಪಡಿಸಿ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿವೇತನ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಹಾಗೂ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್, 20 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್‍ವಿಳಾಸ: https://ssp.postmatric.karnataka.gov.in/

ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್: [email protected] ದೂ.ಸಂ. 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular