HomeLatest NewsBIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ...

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು https://shp.karnataka.gov.in/bcwd ಅರ್ಜಿಯನ್ನು ಸಲ್ಲಿಸಬೇಕು.ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04.10.2025.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bowd.karnataka.gov.in/ ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದುಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular