ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ (ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮೋ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ, ಐ.ಟಿ.ಐ ಮತ್ತು ಡಿಪ್ಲೋಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.06.2025.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು , ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005.


