HomeKarnatakaರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ ವಿದ್ಯಾರ್ಥಿವೇತನ ಹಾಗೂ ಸೌಲಭ್ಯಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು  ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ಕೋರ್ಸ್‍ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ: ಊಟ ಮತ್ತು ವಸತಿ ಸಹಾಯ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ SSP Postmatric Portal ಗೆ ಭೇಟಿ ನೀಡಬಹುದಾಗಿದೆ. ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಮಗ್ರ ಶಿಕ್ಷಣ ಇಲಾಖೆ: ವಿಶೇಷ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ, :   ಸಮಗ್ರ ಶಿಕ್ಷಣ ಕರ್ನಾಟಕ, ಬಳ್ಳಾರಿ ಜಿಲ್ಲೆಯ ಶಿಕ್ಷಣ ವಿಭಾಗದಡಿ 2026-27ನೇ ಶೈಕ್ಷಣಿಕ ಸಾಲಿಗೆ ಅಗತ್ಯವಿರುವ ವಿವಿಧ ವಿಶೇಷ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ನೇರಗುತ್ತಿಗೆ ಆಧಾರದ ಮೇಲೆ ನೇಮಕಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. *ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ:*

ಪ್ರಾಥಮಿಕ ವಿಭಾಗ (1 ರಿಂದ 5ನೇ ತರಗತಿ): ಖಾಲಿ ಇರುವ ಹುದ್ದೆಗಳ ಸಂಖ್ಯೆ- 07. ಅರ್ಹತೆಯು ಆರ್.ಸಿ.ಐ ಸಿ.ಆರ್.ಆರ್ ನಂಬರ್ ಹೊಂದಿರುವ ಡಿ.ಇಡಿ ವಿಶೇಷ ಶಿಕ್ಷಣ ಮುಗಿಸಿರಬೇಕು.

ಪ್ರೌಢ ವಿಭಾಗ (6 ರಿಂದ 8ನೇ ತರಗತಿ ಹಾಗೂ 9 ರಿಂದ 12ನೇ ತರಗತಿ): ಖಾಲಿ ಇರುವ ಹುದ್ದೆಗಳ ಸಂಖ್ಯೆ- 07. ಅರ್ಹತೆಯು ಆರ್.ಸಿ.ಐ ಸಿ.ಆರ್.ಆರ್ ನಂಬರ್ ಹೊಂದಿರುವ ಬಿ.ಇಡಿ ವಿಶೇಷ ಶಿಕ್ಷಣ ಮುಗಿಸಿರಬೇಕು.

*ಆಯ್ಕೆ ಪ್ರಕ್ರಿಯೆ ಮತ್ತು ಸೇವಾ ಜೇಷ್ಠತೆ:*

ಈ ಹಿಂದೆ ಸಮಗ್ರ ಶಿಕ್ಷಣ ಇಲಾಖೆಯಲ್ಲಿ ಬಿ.ಐ.ಇ.ಆರ್.ಟಿ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಅವರ ಸೇವಾ ಜೇಷ್ಠತೆಯನ್ನು ಪರಿಗಣಿಸಿ ಮೊದಲ ಆದ್ಯತೆಯ ಮೇರೆಗೆ ಆಯ್ಕೆ ಮಾಡಲಾಗುವುದು. ನೇಮಕಾತಿಯು ಇಲಾಖೆಯ ನಿಯಮಾವಳಿಗಳನ್ವಯ ನೇರಗುತ್ತಿಗೆ ಮೂಲಕ ನಡೆಯಲಿದೆ.

*ಅರ್ಜಿ ಸಲ್ಲಿಸಬೇಕಾದ ವಿಳಾಸ:*

ಉಪನಿರ್ದೇಶಕರು (ಆ) ಮತ್ತು ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಅಭಿಯಾನ (ಕೆ.ಎಸ್.ಇ.ಇ.ಬಿ), ಕೋಟೆ, ಬಳ್ಳಾರಿ ಇಲ್ಲಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜೂ.20 ರ ಒಳಗಾಗಿ ತಲುಪುವಂತೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗಾಗಿ ಅಭ್ಯರ್ಥಿಗಳು ಕಚೇರಿಯ ವೇಳೆಯಲ್ಲಿ ನೇರವಾಗಿ ಬಳ್ಳಾರಿಯ ಸಮಗ್ರ ಶಿಕ್ಷಣ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಶಿಕ್ಷಣ ಅಭಿಯಾನದ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular