ಬೆಂಗಳೂರು : ಪ್ರಸಕ್ತ (2025-26) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಹಾಗೂ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ” ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ, 15 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ದೀಪಕ್ ಅವರು ತಿಳಿಸಿದ್ದಾರೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://ssp.postmatric.karnataka.gov.in/ ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ಇಲಾಖಾ ಸಹಾಯವಾಣಿ ಸಂಖ್ಯೆ:8050770004. ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್: [email protected] ದೂರವಾಣಿ ಸಂಖ್ಯೆ: 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
ಪ್ರಮುಖ ಯೋಜನೆಗಳು:
• ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ (Post-Matric): ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪಡೆಯುತ್ತಿರುವವರಿಗೆ.
• ವಿದ್ಯಾಸಿರಿ (Vidyasiri): ಹಾಸ್ಟೆಲ್ ಸೌಲಭ್ಯ ಸಿಗದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿಗಾಗಿ ಮಾಸಿಕ ₹1,500 ರಂತೆ (ವಾರ್ಷಿಕ ₹15,000) ಸಹಾಯಧನ ನೀಡಲಾಗುತ್ತದೆ.
• ಶುಲ್ಕ ವಿನಾಯಿತಿ (Fee Concession): ಕಾಲೇಜು ಶುಲ್ಕವನ್ನು ಸರ್ಕಾರವೇ ಭರಿಸುವ ಯೋಜನೆ.

