ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಪರ ಸ್ನಾತಕೋತ್ತರ ಪದವಿಗಳ ಕೆಲ ಕೋರ್ಸುಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ www.ssp.postmartic.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ.30 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ [email protected], ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.ವಿ.ಸೂ.: ಈ ಅರ್ಜಿಗಳಿಗೆ ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಿದ್ದಲ್ಲಿ 2023-24 ಸಾಲಿಗೆ ಶುಲ್ಕ ಮರುಪಾವತಿ ಮಾಡಲು ಕ್ರಮವಹಿಸಲಾಗುವುದು.

