2025-26 ನೇ ಸಾಲಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಆಧಾರ ಜೋಡಣೆ ಮಾಡಿಸಬೇಕು. ನಂತರ ವಿದ್ಯಾರ್ಥಿಯು ಅರ್ಜಿ ಸಲ್ಲಿಸಬೇಕು. ಆಧಾರ್ ಸೀಡಿಂಗ್ ಆಗಿರುವ ಕುರಿತು www.npci.org.in ಪೋರ್ಟಲ್ ನಲ್ಲಿ ಖಚಿತಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2440194 ಗೆ ಸಂಪರ್ಕಿಸಬಹುದು ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.