HomeKarnatakaರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ : 'NMMS' ಪರೀಕ್ಷೆಗೆ ಆನ್‌ಲೈನ್ ಅರ್ಜಿ...

ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನವದೆಹಲಿ ರವರ ಮಾರ್ಗಸೂಚಿಯಂತೆ ಎನ್ಎಂಎಎಸ್ ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್ಕ್ಯುಎಎಸಿ ವತಿಯಿಂದ ನಡೆಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಎನ್ಎಂಎಎಸ್ ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಯ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಪರೀಕ್ಷೆಯ ಆನ್ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ https://kseab.karnataka.gov.in/ ವೆಬ್ಸೈಟ್ನಲ್ಲಿ ಲಭ್ಯವಿದೆ.

ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್ಲೈನ್ನಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಲಭ್ಯವಿರುವ ಎನ್ಎಂಎAಎಸ್ ಲಾಗಿನ್ನಲ್ಲಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್ಸೈಟ್ನಲ್ಲಿನ ಸುತ್ತೋಲೆ ನೋಡಬಹುದು ಹಾಗೂ ಕೆಎಸ್ಕ್ಯುಎಎಸಿ ಕಚೇರಿಯ ದೂ.080-23341615 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular