HomeLatest Newsರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಅಲೆಮಾರಿ/ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ನ.25ರವರೆಗೆ ವಿಸ್ತರಿಸಲಾಗಿದೆ.

ಆಸಕ್ತರು ವೆಬ್ಸೈಟ್https://ssp.postmatric.karnataka.gov.in ಮೂಲಕ ನ.25 ರೊಳಗಾಗಿ ಆನ್ಲೈನ್ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ: 8050770005, ಇ-ಮೇಲ್ [email protected] ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್ [email protected] ಅಥವಾ ದೂ.ಸಂ: 1902 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular