ವಿದ್ಯಾರ್ಥಿಗಳ ಗಮನಕ್ಕೆ : ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023-24 ನೇ ಶೈಕ್ಷಣಿಕ ಸಾಲಿನ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

20 ವರ್ಷ ಮೇಲ್ಪಟ್ಟ ಎಸ್ಎಸ್ಎಲ್ಸಿ ಪಾಸಾದವರು ನ.28 ರೊಳಗೆ ಅರ್ಜಿಯನ್ನು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕಚೇರಿಗೆ ಸಲ್ಲಿಸಬಹುದಾಗಿದೆ.

ಇದು 2 ಸೆಮಿಸ್ಟರ್ಗಳ ಕೋರ್ಸ್ ಆಗಿದ್ದು ರೂ.20,000/- ಶುಲ್ಕವಿದೆ. ವಿಶ್ವವಿದ್ಯಾಲಯದ ವೆಬ್ಸೈಟ್ uahs.edu.in ನಲ್ಲಿ ಅರ್ಜಿ ಪಡೆದು, ರಾಷ್ಟ್ರೀಕೃತ ಬ್ಯಾಂಕ್ನಲ್ಲಿ The Comptroller, KSNUAHS, Iruvakki, Shivamogga-577412 payabale at Shivamogga ಇವರ ಹೆಸರಿನಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.200/- ಹಾಗೂ ಎಸ್ಸಿ, ಎಸ್ಟಿ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳು ರೂ.100/- ಗಳ ಡಿಡಿ ಜೊತೆಗೆ ಅರ್ಜಿ ಸಲ್ಲಿಸಬಹುದೆಂದು ಶಿವಮೊಗ್ಗದ ಇರುವಕ್ಕಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read