HomeLatest Newsವಿದ್ಯಾರ್ಥಿಗಳೇ ಗಮನಿಸಿ : ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

ವಿದ್ಯಾರ್ಥಿಗಳೇ ಗಮನಿಸಿ : ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

ಧಾರವಾಡ : 2025-26 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಠ ಜಾತಿಯ ಉಪಯೋಜನೆ ಅಡಿಯಲ್ಲಿ ಎನ್.ಐ.ಎಸ್ (Six week Certificate Course P.G. Diploma and M.S.C Sports Coaching)ತರಬೇತಿ ಪಡೆಯುತ್ತಿರುವ ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರು ಪಾವತಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಫೆಬ್ರವರಿ 03, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2025-26 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024 ನೇ ಕ್ಯಾಲೆಂಡರ್ ವರ್ಷದಲ್ಲಿ (01-01-2024 ರಿಂದ 31-12-2024) ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಅಧಿಕೃತ ಜಾಲತಾಣ https://sevasindhu.karnataka.gov.in ಮೂಲಕ ಜನವರಿ 31, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular