HomeLatest Newsವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಪ್ರಸಕ್ತ(2025-26)ನೇ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ. ಮತ್ತು ಐಟಿಐ ಹಾಗೂ ಡಿಪ್ಲೊಮೊ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 30 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ: https://shp.karnataka.gov.in/bcwd

ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.1.00 ಲಕ್ಷ ಆಗಿರುತ್ತದೆ.

ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ಅನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳವರ ಕಚೇರಿ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಜಿಲ್ಲಾ ಕಚೇರಿ ಮಡಿಕೇರಿ ದೂ.ಸಂ. 08272-295628, ಮಡಿಕೇರಿ ತಾಲ್ಲೂಕು ಕಚೇರಿ ಮೊ.ಸಂಖ್ಯೆ 8762476790, ವಿರಾಜಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ 9448205919 ಮತ್ತು ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ. 9481772143 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular