HomeKarnatakaವಿದ್ಯಾರ್ಥಿಗಳ ಗಮನಕ್ಕೆ : ಕ.ರಾ.ಮು.ವಿ.ವಿಯ ವಿವಿಧ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ

ವಿದ್ಯಾರ್ಥಿಗಳ ಗಮನಕ್ಕೆ : ಕ.ರಾ.ಮು.ವಿ.ವಿಯ ವಿವಿಧ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ 2023-24 ನೇ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು 2023 ರ ಅಕ್ಟೋಬರ್ 20 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.

ಕೆಲಸಕ್ಕೆ ಹೋಗುವ ಆಸಕ್ತರು ಕ.ರಾ.ಮು.ವಿ ಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ ಇದೇ ಅಕ್ಟೋಬರ್ 20 ರವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಸಹ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸ್ಮಿತಾ ಸುಬ್ಬಯ್ಯ ಹೇಳಿದ್ದಾರೆ.

ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ಕೇಂದ್ರದಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ಳಾದ ಬಿ.ಎ, ಬಿಕಾಂ, ಬಿ.ಬಿ.ಎ, ಬಿ.ಸಿ.ಎ, ಬಿಲಿಬ್ಐಎಸ್ಸಿ, ಬಿ.ಎಸ್ಸಿ, ಬಿಎಸ್ ಡಬ್ಲ್ಯು, ಎಂ.ಎ, ಎಂ.ಸಿ.ಜೆ, ಎಂ.ಕಾಂ, ಎಂ.ಎಸ್ಸಿ, ಎಂಲಿಬ್ಐಎಸ್ಸಿ,{ಎಂಬಿಎ, ಎಂಸಿಎ, ಎಂಎಸ್ಡಬ್ಲ್ಯು ಮತ್ತು ಪಿಜಿ ಸರ್ಟಿಫಿಕೇಟ್ ಡಿಪ್ಲೊಮಾ ಸರ್ಟಿಫಿಕೇಟ್ ಪ್ರೋಗಾಮ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಎಸ್ಒಯು ಯುಜಿಸಿ ಮಾನ್ಯತೆ ಪಡೆದಿದೆ ಮತ್ತು ನ್ಯಾಕ್ ನಿಂದ “ಎ ಪ್ಲಸ್” ಮಾನ್ಯತೆ ಪಡೆದಿದೆ ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯ ನೀಡುವ ಪದವಿಗಳು ರೆಗ್ಯುಲರ್ ಮೂಲಕ ನೀಡುವ ಪದವಿಗಳಿಗೆ ಸಮನಾದ ಅರ್ಹತೆ ಇರುತ್ತದೆ ಎಂದು ಕ.ರಾ.ಮು.ವಿ ಮಡಿಕೇರಿ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.

ಕ.ರಾ.ಮು.ವಿ ಪ್ರಾದೇಶಿಕ ನಿರ್ದೇಶಕರು, ಮಡಿಕೇರಿ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾಂಗಣ ಕಟ್ಟಡ ಮಡಿಕೇರಿ-571201 ದೂ.ಸಂ.08272201147, 8073342310, 7618763654, 9141938803, 8296215714, 9611320191 ನ್ನು ಸಂಪರ್ಕಿಸಬಹುದಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular