ವಿದ್ಯಾರ್ಥಿಗಳ ಗಮನಕ್ಕೆ : ‘ದ್ವಿತೀಯ PUC’ ಪರೀಕ್ಷೆ-3 ಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಬೆಂಗಳೂರು : 2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 28-05-2024 ರಂದು ನಿಗದಿಪಡಿಸಲಾಗಿತ್ತು. ಆದರೆ ಪೋಷಕರು ಹಾಗೂ ವಿದಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಿ ಪರೀಕ್ಷಾ ಮಂಡಳಿ ಆದೇಶಿಸಿದೆ.

ಇದು ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿದ್ದು, ಮುಂದೆ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸುವುದು ಎಂದು ಸುತ್ತೋಲೆ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read