HomeKarnatakaರಾಜ್ಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ...

ರಾಜ್ಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಾದ ಪರ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿಗಳ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.30 ರ ವರೆಗೆ ವಿಸ್ತರಿಸಲಾಗಿದೆ.

ಕೋರ್ಸ್ ಗಳ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾಗಿರುವ ಕಾರಣ ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ತಡವಾಗಿ ಬಂದ ಕಾರಣ ನಿಗದಿಪಡಿಸಿದ ಅವಧಿಯೊಳಗೆ ಅರ್ಜಿಗಳು ಸಲ್ಲಿಕೆಯಾಗದ ಕಾರಣ ಅವಧಿ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಆನ್ ಲೈನ್ ವೆಬ್ ಸೈಟ್ ವಿಳಾಸ https://ssp.postmatric.karnataka.gov.in/ ಗೆ ಭೇಟಿ ನೀಡಬಹುದು.ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಾನುಮತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular