‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾಭ್ಯಾಸ ಸಾಲ ನವೀಕರಣಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ :  ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ ಸಾಲ ನವೀಕರಣಕ್ಕಾಗಿ ಅಲ್ಪಸಂಖ್ಯಾತರ ಜನಾಂಗಕ್ಕೆ ಸೇರಿದ ಮುಸ್ಲಿಂ, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ / ನೀಟ್ ವೃತ್ತಿಪರ ಕೋರ್ಸ್ ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ ಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್., ಎಂ.ಡಿ., ಎಂ.ಎಸ್.), ದಂತ ವೈದ್ಯಕೀಯ (ಬಿ.ಡಿ.ಎಸ್., ಎಂ.ಡಿ. ಎಸ್.), ಆಯುಷ್ ಕೋರ್ಸ್ ಗಳಾದ (ಬಿ.ಆಯುಷ್, ಎಂ. ಆಯುಷ್), ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ (ಬಿ.ಇ /ಬಿ.ಟೆಕ್, ಎಂ.ಇ/ಎಂ.ಟೆಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು ಬಿ.ಆರ್ಕ್, ಎಂ ಆರ್ಕ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್.ಸಿ. ತೋಟಗಾರಿಕೆ, ಕೃಷಿ ಇಂಜಿನಿಯರಿಂಗ್, ಡೈರಿ ತಂತ್ರಜ್ಞಾನ, ಅರಣ್ಯ, ಪಶುವೈದ್ಯಕೀಯ ಮತ್ತು ಪ್ರಾಣಿ ತಂತ್ರಜ್ಞಾನ, ಮೀನುಗಾರಿಕೆ, ರೇಷ್ಮೆ ಕೃಷಿ, ಗೃಹ/ಸಮುದಾಯ ವಿಜ್ಞಾನ ಆಹಾರ ಪೋಷಣೆ ಮತ್ತು ಆಹಾರ ಪದ್ಧತಿ, ಬಿ.ಫಾರ್ಮಾ, ಎಂ.ಫಾರ್ಮಾ ಡಿ ಮತ್ತು ಡಿ ಫಾರ್ಮಾ ನಂತಹ ಪದವಿ ಕೋರ್ಸ್ ಗಳಿಗೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ಸಾಲ ಯೋಜನೆಯಡಿಯಲ್ಲಿ ವಿದ್ಯಾಭ್ಯಾಸ ಸಾಲ ನವೀಕರಣಕ್ಕಾಗಿ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ.12% ರಷ್ಟನ್ನು ಪಾವತಿಸಿ ನಿಗಮದ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಮತ್ತು ಇಂತಹ ವಿದ್ಯಾರ್ಥಿಗಳು ಯಾವುದೇ ರಿನಿವಲ್ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ.

ಆಸಕ್ತರು ವೆಬ್ ಸೈಟ್ https://kmdconline.karnataka.gov.in ನ ಮುಖಾಂತರ ಸಲ್ಲಿಸಿದ ಅರ್ಜಿಯನ್ನು ಹಾರ್ಡ್ ಕಾಪಿಗಳನ್ನು ಮತ್ತು ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿರುವ ಮೂಲ ಹೊಸ ಪರಿಹಾರ ಬಾಂಡ್ (Original New Indemntiy Bond) ಇತರ ಮೂಲ ದಾಖಲಾತಿಗಳೊಂದಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)., ಜಿಲ್ಲಾ ವ್ಯಾವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ , ಉತ್ತರ ವಿಭಾಗ, ನಂ.40, 2ನೇ ಅಡ್ಡ ರಸ್ತೆ, ಇಯರಿಂಗ್ ಕ್ಲಿನಿಕ್ ಎದುರು, ನೂರ್ ಮಸೀದಿ ಹತ್ತಿರ, 4ನೇ ಮುಖ್ಯರಸ್ತೆ, ವಸಂತಪ್ಪ ಬ್ಲಾಕ್, ಗಂಗಾ ನಗರ, ಬೆಂಗಳೂರು-32 ಇಲ್ಲಿ ಸಲ್ಲಿಸಬಹುದು. ಆನ್ ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-23539786 ಅಥವಾ ಸಹಾಯವಾಣಿ ಸಂಖ್ಯೆ: 8277799990 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಉತ್ತರ ವಿಭಾಗದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read