HomeKarnatakaವಿದ್ಯಾರ್ಥಿಗಳ ಗಮನಕ್ಕೆ : 'NMMS' ಪರೀಕ್ಷೆಯ ಕೀ ಉತ್ತರ ಪ್ರಕಟ, ಆಕ್ಷೇಪಣೆ ಆಹ್ವಾನ

ವಿದ್ಯಾರ್ಥಿಗಳ ಗಮನಕ್ಕೆ : ‘NMMS’ ಪರೀಕ್ಷೆಯ ಕೀ ಉತ್ತರ ಪ್ರಕಟ, ಆಕ್ಷೇಪಣೆ ಆಹ್ವಾನ

ಬೆಂಗಳೂರು : 2023-24ನೇ ಸಾಲಿನ NMMS ಪರೀಕ್ಷೆಯ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು 16.01.2024ರ ಸಂಜೆ 5.30 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಶ್ನೆ ಪತ್ರಿಕೆಗಳಲ್ಲಿನ ಪ್ರಶ್ನೆಗಳ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಈ ಕಛೇರಿಯಿಂದ ನೀಡಲಾದ ನಿಗದಿತ ನಮೂನೆ (ಮಂಡಳಿಯ ವೆಬ್ ಸೈಟ್‌ನಲ್ಲಿ https://kseab.karnataka.gov.in/ ದೊರೆಯುತ್ತದೆ) ಯಲ್ಲಿ ದಿನಾಂಕ:11.01.2024 ರಿಂದ 16.01.2024ರ ಸಂಜೆ 5.30 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

NMMS ಪರೀಕ್ಷೆಯ ಪ್ರಶ್ನೆಪತ್ರಿಕೆ-1 ಮತ್ತು 2ರ ಪ್ರತಿ ಪ್ರಶ್ನೆಗಳಿಗೆ ಪ್ರತ್ಯೇಕವಾಗಿ ಆಕ್ಷೇಪಣೆಗಳನ್ನು ಪೂರಕ – ([email protected])  ನಿರ್ದೇಶಕರು, ಕೆ.ಎಸ್.ಕ್ಯು.ಎ.ಎ.ಸಿ, ಕೆ.ಎಸ್.ಇ.ಎ.ಬಿ, 1ನೇ ಮಹಡಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಈ ವಿಳಾಸಕ್ಕೆ ದಿನಾಂಕ:16.01.2024 ರ ಸಂಜೆ 5.30ರ ಒಳಗೆ ತಲುಪುವಂತೆ ಸಲ್ಲಿಸುವುದು. ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಬರುವಂತಹ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular