HomeKarnatakaವಿದ್ಯಾರ್ಥಿಗಳ ಗಮನಕ್ಕೆ: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ವಿದ್ಯಾರ್ಥಿಗಳ ಗಮನಕ್ಕೆ: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ಫಲಿತಾಂಶವನ್ನು 9 ರಂದು ಗುರುವಾರ ಪ್ರಕಟಿಸಲಾಗುವುದು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕ ಹೆಚ್.ಎನ್. ಗೋಪಾಲಕೃಷ್ಣ ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ಡಿಜಿ ಲಾಕರ್ ಮೂಲಕ ವಿದ್ಯಾರ್ಥಿಗಳು ಫಲಿತಾಂಶ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಸರ್ವರ್ ಸಮಸ್ಯೆಯಿಂದ ಆಗುತ್ತಿದ್ದ ತೊಂದರೆಗಳು ನಿವಾರಣೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಏಪ್ರಿಲ್ 9ರಂದು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಅದೇ ದಿನ ಅಧಿಕೃತ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ಪರೀಕ್ಷೆಗೆ ಮೊದಲೇ ಏ. 7ರಂದು ಫಲಿತಾಂಶ ಪ್ರಕಟಿಸುವುದಾಗಿ ಸಂಭಾವ್ಯ ದಿನಾಂಕದ ಬಗ್ಗೆ ಹೇಳಲಾಗಿತ್ತು.  

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular