ದುನಿಯಾ ಡಿಜಿಟಲ್ ಡೆಸ್ಕ್ : ಜನವರಿ 2026ನೇ ಅಧಿವೇಶನಕ್ಕಾಗಿ ‘ಡೆಹರಾಡೂನ್’ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗೆ ಪ್ರವೇಶಕ್ಕೆ ಬೆಂಗಳೂರು ಕೇಂದ್ರದಲ್ಲಿ ಕರ್ನಾಟಕ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರಿಗೆ ನಡೆಯುವ ಅರ್ಹತಾ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 10 ಏಪ್ರಿಲ್ 2025 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ: www.rimc.gov.in ಯನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.