HomeLatest Newsರಾಜ್ಯದ ವಿಕಲಚೇತನರ ಗಮನಕ್ಕೆ : 'ಸಾಧನ ಯೋಜನೆ'ಯಡಿ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿಕಲಚೇತನರ ಗಮನಕ್ಕೆ : ‘ಸಾಧನ ಯೋಜನೆ’ಯಡಿ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ‘ಸಾಧನ ಯೋಜನೆಯಡಿ’ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ 2025-26 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ https://sevasindhuservices.karnataka.gov.in ಪೋರ್ಟ್‍ಲ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ನೇರವಾಗಿಯೂ ಸಹ ತಮ್ಮ ಲಾಗಿನ್ ಬಳಸಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಸಾಧನೆ ಯೋಜನೆಗೆ ಇದೇ ಜನವರಿ, 31 ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಜಿಲ್ಲೆಯ ಅರ್ಹ ವಿಶೇಷಚೇತನರು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‍ಡಬ್ಲ್ಯು ಹಾಗೂ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ-8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ-9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ–8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ.08272-295829ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular