HomeLatest Newsಶಿವಮೊಗ್ಗ ಜನತೆ ಗಮನಕ್ಕೆ : ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗೆ ವಿಶೇಷ ಕೌಂಟರ್

ಶಿವಮೊಗ್ಗ ಜನತೆ ಗಮನಕ್ಕೆ : ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗೆ ವಿಶೇಷ ಕೌಂಟರ್

ಶಿವಮೊಗ್ಗ :   ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಹಾಗೂ ಉಪವಿಭಾಗದ ವತಿಯಿಂದ ಮಾರ್ಚ್ 08 ರಂದು 2025-26ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗುತ್ತದೆ.

ಕಿದ್ವಾಯಿ ಶಾಲೆ ಪಕ್ಕ ಆರ್.ಎಂ.ಎಲ್. ನಗರ, ದುರ್ಗಿಗುಡಿ ಸರ್ಕಾರಿ ಶಾಲೆ ಹತ್ತಿರ, ಶಿವಪ್ಪ ನಾಯಕ ಅರಮನೆ ಮುಂಭಾಗ ಕೋಟೆ ರಸ್ತೆ, ಅಶೋಕ ನಗರದ ನಂದಿನಿ ಬೂತ್ ಹತ್ತಿರ ಹಾಗೂ ಇಂದಿರಾ ಗಾಂಧಿ ಬಡಾವಣೆ ಐಜಿ ಸರ್ಕಲ್ ಬಸ್ ಸ್ಟಾö್ಯಂಡ್ ಹತ್ತಿರ ಈ ಸ್ಥಳಗಳಲ್ಲಿ ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗುತ್ತಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸಬೇಕು. ಇಲ್ಲವಾದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಮಂಡಳಿಯೊಂದಿಗ ಸಹಕರಿಸಬೇಕೆಂದು ಕನನೀಸ ಮತ್ತು ಒಚ ಮಂಡಳಿ ನಿರ್ವಹಣಾ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಬಿಯಂತರರು ತಿಳಿಸಿದ್ದಾರೆ.

ಎಸ್‌ಸಿ-ಎಸ್‌ಟಿ ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ :   ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯ ಮಟ್ಟದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಯಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಸಾಲಿನಲ್ಲಿ ಏಪ್ರಿಲ್ 05 ರಂದು ಡಾ.ಬಾಬು ಜಗಜೀವನರಾಂ ರವರ 119ನೇ ಜನ್ಮದಿನಾಚರಣೆ ಹಾಗೂ ಏಪ್ರಿಲ್ 14 ರಂದು ಡಾ.ಬಿ ಆರ್. ಅಂಬೇಡ್ಕರ್‌ರವರ 135 ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿದಾರರು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿ ಮಾರ್ಚ್ 9 ರೊಳಗೆ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಿ ಮಲ್ಲೇಶಪ್ಪ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular