BIG NEWS : ರಾಜ್ಯದ ಗ್ರಾಮೀಣ ಭಾಗದ ಜನತೆ ಗಮನಕ್ಕೆ : ಇ-ಸ್ವತ್ತು ಪಡೆಯಲು ಸಮಸ್ಯೆ ಆದರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು :  ಇ – ಸ್ವತ್ತು ಪಡೆಯಲು ಇರುವ ಎಲ್ಲಾ ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇ – ಸ್ವತ್ತು ಸಹಾಯವಾಣಿ 9483476000 ಸ್ಥಾಪಿಸಲಾಗಿದೆ.

ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್‌ ರೂಪದ ಇ – ಖಾತಾ ಪಡೆಯಲು ಇಲಾಖೆಯು ಅವಕಾಶ ಕಲ್ಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ನಿಮ್ಮ ಮನೆ ಬಾಗಿಲಿಗೆ ಇ-ಸ್ವತ್ತು ತಂದುಕೊಡುವ ಕೆಲಸ ಮಾಡುತ್ತಿದ್ದೇವೆ. ಇದು ನಿಮ್ಮೆಲ್ಲರ ಬದುಕಿಗೆ ಹೊಸರೂಪ ನೀಡಿ, ಎಲ್ಲ ಪಂಚಾಯ್ತಿ ಆಸ್ತಿ ದಾಖಲೆಗಳಿಗೆ 11 ಬಿ ಖಾತೆಗಳನ್ನು ನೀಡಲಾಗುತ್ತಿದೆ. ನೀವು ಅರ್ಜಿ ಹಾಕಿ 15 ದಿನದ ಒಳಗೆ ಖಾತೆ ನೀಡಲು ಸರ್ಕಾರ ತೀರ್ಮಾನಿಸಿದೆ. ಯಾರೂ ಕಚೇರಿ ಅಲೆಯುವುದು ಬೇಡ ಎಂದು ಆನ್ಲೈನ್ ಹಾಗೂ ಬಾಪುಜಿ ಕೇಂದ್ರಗಳಲ್ಲಿ ವಿತರಣೆಗೆ ಅವಕಾಶ ನೀಡಲಾಗಿದೆ. 11 ಬಿ ಮೂಲಕ ತೆರಿಗೆ ಪಾವತಿಸಿ, ಆಸ್ತಿ ದಾಖಲೆ ಸರಿಪಡಿಸಿಕೊಳ್ಳಿ ಎಂದು ಡಿಸಿಎಂ ಡಿಕೆಶಿ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಉಳುವವನಿಗೆ ಭೂಮಿ, ಬಗರ್ ಹುಕುಂ ಸಾಗುವಳಿ ಜಮೀನು ಸಕ್ರಮ ಮಾಡಿದೆ. ಅರಣ್ಯ ಪ್ರದೇಶದಲ್ಲೂ ವಾಸಿಸುವವರಿಗೆ ಕಾನೂನಿನ ಅಡಿಯಲ್ಲಿ ಸಹಾಯ ಮಾಡಿದೆ. ನಿಮ್ಮ ಭೂಮಿ ಹಾಗೂ ಆಸ್ತಿ ದಾಖಲೆ ಸರಿಪಡಿಸುವುದು ನಮ್ಮ ಆರನೇ ಗ್ಯಾರಂಟಿ ಯೋಜನೆಯಾಗಿದೆ. ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳನ್ನು ಇ ಖಾತಾ ಅಭಿಯಾನ ಮಾಡಿದ್ದು, 6 ಲಕ್ಷ ಜನರಿಗೆ ಇ ಖಾತಾ ವಿತರಿಸಲಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಕೃಷ್ಣ ಬೈರೇಗೌಡರು ಹಾಗೂ ಪ್ರಿಯಾಂಕ್ ಖರ್ಗೆ ಅವರು ಸೇರಿ 1,11,111 ಜನರಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಿಂದ ಹೊರಗಿರುವ ತಾಂಡಾಗಳನ್ನು ಸಕ್ರಮ ಮಾಡಿ ಹಕ್ಕುಪತ್ರ, ಭೂ ದಾಖಲೆಗಳನ್ನು ವಿತರಿಸಿದ್ದೇವೆ ಎಂದು ವಿವರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read