ಬೆಂಗಳೂರು : ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್11 ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದರಿಂದಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಸೇವೆ (OPD) ಸ್ಥಗಿತಗೊಳ್ಳುವ ಸಾಧ್ಯತೆಯಿದ್ದು, ಸಾರ್ವಜನಿಕರಿಗೆ ಚಿಕಿತ್ಸೆಯ ಆತಂಕ ಎದುರಾಗಿದೆ.
ಹೌದು. ರಾಜ್ಯದ ಸರ್ಕಾರಿ ವೈದ್ಯರ ದೀರ್ಘಕಾಲದ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ, ಮಾರ್ಚ್ 11 ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಮುಷ್ಕರದಿಂದಾಗಿ ಜಿಲ್ಲಾ, ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊರರೋಗಿಗಳ ವಿಭಾಗ (OPD) ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆಯಿದ್ದು, ರಾಜ್ಯದ ಆರೋಗ್ಯ ಸೇವೆಯಲ್ಲಿ ಏರುಪೇರಾಗುವ ಭೀತಿ ಎದುರಾಗಿದೆ. ವೇತನ ಶ್ರೇಣಿ ಸುಧಾರಣೆ, ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ವೈದ್ಯರ ಸುರಕ್ಷತೆಗೆ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕೆಂದು ಆಗ್ರಹಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವೇತನ ಶ್ರೇಣಿಯ ಸುಧಾರಣೆ ಮತ್ತು ಭತ್ಯೆಗಳ ಹೆಚ್ಚಳಕ್ಕೆ ಆಗ್ರಹ,. ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವುದು.ಆಸ್ಪತ್ರೆಗಳಲ್ಲಿ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದು.ವೈದ್ಯರ ಮೇಲಿನ ಹಲ್ಲೆಗಳನ್ನು ತಡೆಯಲು ಕಠಿಣ ಕಾನೂನು ಜಾರಿಗೆ ತರುವುದು ಸೇರಿದಂತೆ ವಿವಿಧ ಬೇಡಿಗೆಗಳಿಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಲಾಗುತ್ತಿದೆ.
ಯಾವ ಸೇವೆಗಳು ಇರುತ್ತವೆ? ಯಾವುದು ಇರುವುದಿಲ್ಲ?
| ಸೇವೆಗಳು | ಲಭ್ಯತೆ |
| ಹೊರ ರೋಗಿಗಳ ವಿಭಾಗ (OPD) | ಲಭ್ಯವಿರುವುದಿಲ್ಲ (ಸ್ಥಗಿತ) |
| ತುರ್ತು ಚಿಕಿತ್ಸೆ (Emergency) | ಲಭ್ಯವಿರುತ್ತದೆ |
| ಐಸಿಯು (ICU) ಸೇವೆಗಳು | ಲಭ್ಯವಿರುತ್ತದೆ |
| ಹೆರಿಗೆ ಸೇವೆಗಳು (Labor Room) | ಲಭ್ಯವಿರುತ್ತದೆ |
| ಖಾಸಗಿ ಆಸ್ಪತ್ರೆಗಳು | ಎಂದಿನಂತೆ ಕಾರ್ಯನಿರ್ವಹಿಸಲಿವೆ |
ವೈದ್ಯರ ಸಂಘವು ಈಗಾಗಲೇ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸೂಕ್ತ ಸ್ಪಂದನೆ ಸಿಗದ ಕಾರಣ, ಈ ಬಾರಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಜಿಲ್ಲಾ, ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬರುವ ಬಡ ರೋಗಿಗಳಿಗೆ ತೀವ್ರ ತೊಂದರೆಯಾಗುವ ಭೀತಿ ಎದುರಾಗಿದೆ.

